ಚರಂಡಿ ಕಾಮಗಾರಿ ವೀಕ್ಷಿಸಿದ ಶಾಸಕ

11 vpt 2.2
Published on

ವಿರಾಜಪೇಟೆ: ನಗರದ ಸುಣ್ಣದ ಬೀದಿ ರಸ್ತೆಗೆ ಹೊಂದಿಕೊಂಡಿರುವ ಮಾಂಸ ಮಾರುಕಟ್ಟೆಯ ಚರಂಡಿ ಕಾಮಗಾರಿಗಳ ಬಗ್ಗೆ ಮಾಹಿತಿ ತಿಳಿಯಲು ಶಾಸಕ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಂಸ ಮಾರುಕಟ್ಟೆಗೆ ಹೊಂದಿಕೊಂಡಿರುವ ಚರಂಡಿಗಳು ಶಿಥಿಲವಾಗಿದ್ದು, ನಗರ ಅಭಿವೃದ್ಧಿ ಅನುದಾನದ ಅಡಿಯಲ್ಲಿ ಚರಂಡಿಯ ದುರಸ್ತಿ ಕಾಮಗಾರಿಗಳು ನ.11ರ ರಾತ್ರಿಯಿಂದ ಅರಂಭವಾಗಿವೆ. ಈ ಹಿನ್ನೆಲೆಯಲ್ಲಿ ಶಾಸಕರು ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಬೆಳಗ್ಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ರಸ್ತೆಯು ಏಕಮುಖ ಸಂಚಾರವಾಗಿದ್ದು ವಾಹನಗಳ ದಟ್ಟಣೆ ಹೆಚ್ಚಾಗುತಿದ್ದು ಶೀಘ್ರ ಕಾಮಗಾರಿಗಳು ಮುಗಿಸುವಂತೆ ಮತ್ತು ಲೋಪವಾಗದ ರೀತಿಯಲ್ಲಿ ಗುಣಮಟ್ಟದ ಕಾಮಗಾರಿಗಳು ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net