ಚರಂಡಿಗಳಿಗೆ ತಡೆಗೋಡೆ ನಿರ್ಮಿಸಲು ಆಗ್ರಹ

Karmika
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.47436523, 0.475143);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
Published on

ಚಿತ್ರದುರ್ಗ: ನಗರದ ವಿವಿಧೆಡೆ ಚರಂಡಿಗಳಿಗೆ ತಡೆಗೋಡೆ ನಿರ್ಮಿಸಬೇಕು ಎಂದು ಆಗ್ರಹಿಸಿ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣಗಳ ಕಾರ್ಮಿಕ ಸಂಘಟನೆ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ತಡೆಗೋಡೆ ನಿರ್ಮಿಸದ ಕಾರಣ ಮಳೆಗಾಲದಲ್ಲಿ ನೀರು ರಸ್ತೆಯ ಮೇಲೆಲ್ಲ ಹರಿದು ಜನಸಾಮಾನ್ಯರಿಗೆ ಸಮಸ್ಯೆ ತಂದೊಡ್ಡುತ್ತಿವೆ. ಆದ್ದರಿಂದ ಜಿಲ್ಲಾಡಳಿತ, ನಗರಸಭೆ ಇತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಹೊಳಲ್ಕೆರೆ ರಸ್ತೆಯ ಬರಗೇರಮ್ಮ ದೇಗುಲ ಮುಂಭಾಗ, ಎಪಿಎಂಸಿ ಮುಖ್ಯರಸ್ತೆ ಹಾಗೂ ಕಚೇರಿ ಮುಂಭಾಗ, ದಾವಣಗೆರೆ ರಸ್ತೆ ರೈಲ್ವೆಗೇಟ್ ಸಮೀಪವಿರುವ ಚರಂಡಿಗಳಿಗೆ ತ್ವರಿತವಾಗಿ ತಡೆಗೋಡೆ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಚಳ್ಳಕೆರೆ ಗೇಟ್ ಬಳಿಯ ಮುಖ್ಯ ಸರ್ಕಲ್ ಅವೈಜ್ಞಾನಿಕವಾಗಿದ್ದು, ಅದನ್ನು ಸರಿಪಡಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದರು.

ಪದಾಧಿಕಾರಿಗಳಾದ ವೈ.ಕುಮಾರ್, ರಾಜಣ್ಣ, ಸಲೀಮ್, ಹಿಜಾದ್, ಫೈರೋಜ್, ತಿಮ್ಮಯ್ಯ, ಉಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net