ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ:

ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ:
Published on

ಹಾಸನ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೆರಗು ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಅವಘಟದಿಂದ ಕಾರಿನಲ್ಲಿದ್ದ ಮೂವರಿಗೆ ಸಣ್ಣ, ಪುಟ್ಟ ಗಾಯಗಳಾಗಿವೆ.
ಆನಳ್ಳಿ ಗ್ರಾಮದ ಅಶೋಕ್ ಎಂಬುವವರು ತಮ್ಮ ಓಮ್ನಿ ಕಾರಿನಲ್ಲಿ ಇಬ್ಬರು ಸ್ನೇಹಿತರೊಂದಿಗೆ ತಮ್ಮ ಇಟ್ಟಿಗೆ ಫ್ಯಾಕ್ಟರಿಗೆ ಹೋಗಿ ವಾಪಾಸ್ಸಾಗುತ್ತಿದ್ದಾಗ ಹೆರಗು ಗ್ರಾಮದ ಪೆಟ್ರೋಲ್ ಬಂಕ್ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಗಾಬರಿಗೊಂಡ ಅಶೋಕ್ ಕಾರು ನಿಲ್ಲಿಸಿ ಇಬ್ಬರು ಸ್ನೇಹಿತರೊಂದಿಗೆ ಕೆಳಗಿಳಿದಿದ್ದಾರೆ. ಬೆಂಕಿ ಜೋರಾಗಿ ಓಮ್ನಿ ಕಾರು ಸಂಪೂರ್ಣ ಸುಟ್ಟು ಹೋಗಿದ್ದು ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಬೆಂಕಿ ನಂದಿಸಲು ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗು ಗ್ರಾಮಸ್ಥರು ಯತ್ನಿಸಿದರು ಸಾಧ್ಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು ಅಷ್ಟರಲ್ಲಾಗಲೇ ಓಮ್ನಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಘಟನಾ ಸ್ಥಳಕ್ಕೆ ದುದ್ದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net