

ಬೀದರ್: ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆ ನಂತರವೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ದೂರಿದ್ದಾರೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ, ನ. 30ರಂದು ಗ್ರಾಪಂ ಚುನಾವಣೆ ಘೋಷಣೆಯಾಗಿದೆ. ಅಂದು ಸಚಿವ ಚವ್ಹಾಣ್ ಅವರು ಕಮಲನಗರ ಹೋಬಳಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಂದು ಜರುಗಿದ ಕಾಮಗಾರಿಗಳ ಶಂಕುಸ್ಥಾಪನೆ ಅಥವಾ ಘೋಷಣೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆಯೂ ಆಗ್ರಹಿಸಿದ್ದಾರೆ.