ಚಾ.ನಗರ ವಿವಿ ಕ್ರೀಡಾ ಸಲಹಾ ಸಮಿತಿ ರಚನೆ

Published on

ಚಾಮರಾಜನಗರ: ಚಾ.ನಗರ ವಿಶ್ವ ವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆ ಆಯೋಜನೆ ಮಾಡಲು ಕ್ರಿಯಾ ಯೋಜನೆ ರೂಪಿಸುವ ಕುರಿತು ಕ್ರೀಡಾ ಸಲಹಾ ಸಮಿತಿ ರಚನೆ ಮಾಡಲಾಗಿದೆ.

ಈ ಸಮಿತಿಗೆ ವಿಶ್ವ ವಿದ್ಯಾಲಯದ ಕುಲಪತಿ ಅಧ್ಯಕ್ಷರಾಗಿದ್ದು, ಕುಲ ಸಚಿವರು, ಹಣಕಾಸು ಅಧಿಕಾರಿಗಳು, ಯುವಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಒಳಗೊಂಡಂತೆ ಮೌಲ್ಯಮಾಪನ ಮಂಡಳಿ ನಿರ್ದೇಶಕ ಡಾ.ವಿ.ಜಿ.ಸಿದ್ದರಾಜು, ಸಿಂಡಿಕೇಟ್ ಸದಸ್ಯರಾದ ಪ್ರೊ.ಎ.ಆರ್.ಮದನಕುಮಾರ್, ಶಿವಪ್ರಕಾಶ್, ಮೈಸೂರು ವಿಶ್ವವಿದ್ಯಾಲಯದ ಪ್ರೊ.ಮದಿಅಳಗನ್, ಡಾ.ಪಿ.ಕೃಷ್ಣಯ್ಯ, ಪತ್ರುರ್ತರಾದ ಜಿ.ಬಂಗಾರು, ಎ.ಎಸ್.ಮಣಿಕಂಠ, ಕೊಳ್ಳೇಗಾಲದ ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಯಶಂಕರ್, ಜೆಎಸ್‌ಎಸ್ ಕಾಲೇಜಿನ ಎಸ್.ಉಮೇಶ್, ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸ್‌ಗೌಡ, ಸಿ.ಜಿ.ಕಾರ್ತಿಕ್ ನಾಯಕ ಅವರನ್ನು ಸದಸ್ಯರನ್ನಾಗಿ ಹಾಗೂ ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಶಾಂತರಾಜು ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net