ಚಾ.ನಗರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣ

22rajesh7
Published on

ಚಾಮರಾಜನಗರ: ಚಾಮರಾಜನಗರದಲ್ಲಿ ಸುಮಾರು 8 ಕೋಟಿ ರೂ, ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಮಾಹಿತಿ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದು, ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು 7 ಕೋಟಿ ರೂ, ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. 2025ರ ಸೆಪ್ಟೆಂಬರ್ ವೇಳೆಗೆ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಅಲ್ಲದೆ, ಚಾಮರಾಜನಗರದಲ್ಲಿ ಸುಮಾರು 8 ಕೋಟಿ ರೂ, ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಹಾಗೂ ಹಾಸನದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯವನ್ನು 10.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಈ ಕಾಮಗಾರಿಗಳನ್ನು ವೇಗಗೊಳಿಸಲು ಸದರಿ ಕೇಂದ್ರದ ಅಧ್ಯಕ್ಷರಾದ ಜಿಲ್ಲಾಧಿಕಾರಿ, ಕೇಂದ್ರದ ನೋಡಲ್ ಅಧಿಕಾರಿ ಹಾಗೂ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಸಂಸ್ಥೆಯೊಂದಿಗೆ ನಿರಂತರವಾಗಿ ಸಮನ್ವಯವನ್ನು ಸಾಧಿಸಲಾಗುತ್ತಿದೆ. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net