ಚಾಕುವಿನಿಂದ ಇರಿದು ಕೊಲೆ

Published on

ಮಧುಗಿರಿ: ತಾಲೂಕಿನ ಮಿಡಿಗೇಶಿ ಹೋಬಳಿಯ ವೀರ ಚಿನ್ನೇನಹಳ್ಳಿಯಲ್ಲಿ ಮಂಗಳವಾರ ರಾತ್ರಿ ಅಪರಿಚಿತರು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ್ದಾರೆ. ರಾಜಣ್ಣ (46) ಹತ್ಯೆಯಾದವರು. ಮಂಗಳವಾರ ರಾತ್ರಿ 10ರ ಸುಮಾರಿಗೆ ಹೊಲಕ್ಕೆ ಹೋಗಿ ವಾಪಾಸಾಗುತ್ತಿದ್ದಾಗ ಏಕಾಏಕಿ ದಾಳಿ ಮಾಡಿ ಕತ್ತು ಹಾಗೂ ಹೊಟ್ಟೆ ಬಳಿ ಚಾಕುವಿನಿಂದ ಇರಿದಿದ್ದಾರೆ.ಟನಾ ಸ್ಥಳ ಪರಿಶೀಲಿಸಿದ ಮಿಡಿಗೇಶಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಎಫ್​ಎಸ್​ಎಲ್​ ತಂಡ ಹಾಗೂ ಶ್ವಾನದಳ, ಹೆಚ್ಚುವರಿ ಎಸ್ಪಿ ಗೋಪಾಲ್​, ಮಧುಗಿರಿ ಸಿಪಿಐ ಹನುಮಂತರಾಯಪ್ಪ, ಪಿಎಸ್​ಐ ಮೊಹಮ್ಮದ್​ ಪೈಗಂಬರ್​ ಭೇಟಿ ನೀಡಿ ಪರಿಶೀಲಿಸಿದ್ದು, ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಬೆಳಗ್ಗೆ ಗ್ರಾಮಕ್ಕೆ ಸಹಕಾರ ಸಚಿವ ಕೆ.ಎನ್​.ರಾಜಣ್ಣ ಭೇಟಿ ನೀಡಿ ಮಾಹಿತಿ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net