

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಭೇಟಿ ಮಾಡಲು ರಾಜಕಾರಣಿಗಳು ಹಿಂದೇಟು ಹಾಕುತ್ತಿದ್ದ ಕಾಲವೊಂದಿತ್ತು, ಆದರೇ ಆ ಎಲ್ಲಾ ಮೌಢ್ಯವನ್ನು ಅಳಿಸಿಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ 6ನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 2ನೇ ಅವಧಿಯಲ್ಲಿ ಸಿಎಂ ಆದ ಮೂರು ತಿಂಗಳೊಳಗೆ ಚಾಮರಾಜನಗರಕ್ಕೆ ಭೇಟಿ ಕೊಟ್ಟು ಕೆಡಿಪಿ ಸಭೆಯನ್ನು ನಡೆಸಿದ್ದರು. ಆ ಬಳಿಕ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ಯಾರೆಂಟಿ ಯೋಜನೆ ಫಲಾನುಭವಿಗಳ ಸಮಾವೇಶ ನಡೆಸಿದ್ದರು. ಈಗ ನ.7 ರ ಶನಿವಾರ ವಿವಿಧ ಕಾರ್ಯಕ್ರಮಗಳಿಗಾಗಿ ಕೊಳ್ಳೇಗಾಲಕ್ಕೆ ಭೇಟಿ ನೀಡುತ್ತಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿರುವ ನೂತನ ಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಬಳಿಕ ಕೊಳ್ಳೇಗಾಲ ಪಟ್ಟಣದ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಆಯೋಜಿಸಿರುವ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ 109ನೇ ಜಯಂತ್ಯುತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ ಯಳಂದೂರಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿರುವ ಯಳಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
================
ಮೊದಲ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಚಾಮರಾಜನಗರ ಜಿಲ್ಲಾಕೇಂದ್ರಕ್ಕೆ 15ಕ್ಕೂ ಅಧಿಕ ಬಾರಿ ಭೇಟಿ ಕೊಟ್ಟು 5 ವರ್ಷ ಸುಭದ್ರವಾಗಿ ಆಡಳಿತ ನಡೆಸಿ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ಅಳಿಸಿದ್ದರು. ಜಿಲ್ಲೆಗೆ ಹಲವಾರು ಬಾರಿ ಭೇಟಿ ನೀಡುವ ಜತೆಗೆ ಸಾವಿರಾರು ಕೋಟಿ ಅನುದಾನವನ್ನೂ ಗಡಿಜಿಲ್ಲೆಗೆ ಹರಿಸಿದ್ದರು.
ಮೊದಲ ಅವಧಿಯಲ್ಲಿ 15ಕ್ಕೂ ಹೆಚ್ಚು ಬಾರಿ ಭೇಟಿ: