

ಚಾಮರಾಜನಗರ: ಶಾಸಕ ಪುಟ್ಟರಂಗಶೆಟ್ಟಿ ಪುತ್ರ ಪಿ. ಚಾಮರಾಜ್ (42) ನಿಧನಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಸಹೃದಯಿ ಪುಟ್ಟರಂಗಶೆಟ್ಟಿ ಅವರ ಹಿರಿಯ ಮಗ ಚಾಮರಾಜ್ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಪುತ್ರಶೋಕವನ್ನು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಪುಟ್ಟರಂಗಶೆಟ್ಟಿ ಅವರಿಗೆ ಕರುಣಿಸಲಿ, ಮೃತ ಚಾಮರಾಜ್ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.