ಚಾಮುಂಡಿಬೆಟ್ಟಕ್ಕೆ ಎಲ್ಲ ಬಗೆಯ ವಾಹನಗಳ ಪ್ರವೇಶ ನಿಷೇಧಿಸಲು ಚಿಂತನೆ

mysore
Published on

ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಬರುವ ಲಕ್ಷಾಂತರ ಭಕ್ತಾದಿಗಳ ಒತ್ತದ ಮತ್ತು ಪಾರ್ಕಿಂಗ್ ಸಮಸ್ಯೆ ನಿರ್ವಹಣೆ ದೃಷ್ಟಿಯಿಂದ ಚಾಮುಂಡಿಬೆಟ್ಟಕ್ಕೆ ಎಲ್ಲ ಬಗೆಯ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲು ಜಿಲ್ಲಾಡಳಿತ ಮತ್ತು ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇದೆ.

ಬೆಟ್ಟಕ್ಕೆ ನಿತ್ಯ ಲಕ್ಷಾಂತರ ಜನ ಭೇಟಿ ನೀಡುವ ಕಾರಣ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ಎದುರಾಗಿದೆ. ಭಕ್ತರ ಒತ್ತಡ ತಪ್ಪಿಸುವ ಸಲುವಾಗಿ ಅಲ್ಲಿ ಸಾರ್ವಜನಿಕ ವಾಹನಗಳ ನಿರ್ಬಂಧಕ್ಕೆ ಮುಂದಾಗಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಎಲ್ಲ ಮಾದರಿಯ ವಾಹನಗಳ ನಿರ್ಬಂಧ ವಿಧಿಸಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪಾರ್ಕಿಂಗ್ ಸ್ಥಳ ನಿಗದಿ ಮಾಡಿ ಪಾರ್ಕಿಂಗ್ ಸ್ಥಳದಿಂದಲೇ ಭಕ್ತರು, ಸಾರ್ವಜನಿಕರನ್ನು ವಾಹನಗಳ ಮೂಲಕ ಕರೆ ತರಲು ಜಿಲ್ಲಾಡಳಿತ ಹಾಗೂ ಪ್ರಾಧಿಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಸಂಬಂಧ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಜಿಲ್ಲಾಡಳಿತ ಪ್ರಾಧಿಕಾರ ನಿರ್ಧಾರಕ್ಕೆ ಕೆಲ ಭಕ್ತರು ಸ್ವಾಗತ ಮಾಡಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

‘ದಿನೇ ದಿನೆ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು, ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಬೆಟ್ಟದ ಒತ್ತಡ ತಪ್ಪಿಸಿ, ಸುಗಮ ರೀತಿ ದೇವರ ದರ್ಶನಕ್ಕೆ ಅವಕಾಶವಾಗುಂತೆ ಎಲ್ಲ ಬಗೆಯ ವಾಹನಗಳನ್ನು ಬೆಟ್ಟ ಪ್ರವೇಶಿದಂತೆ ಶಾಶ್ವತವಾಗಿ ನಿರ್ಬಂಧಿಸಬೇಕೆಂದು ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದಕ್ಕೆ ಜಿಲ್ಲಾಧಿಕಾರಿಗಳು ಸಮ್ಮಿತಿಸಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸ ಸರ್ಕಾರದಿಂದಲೇ ಪರ್ಯಾಯ ಸಾರ್ವಜನಿಕ ವಾಹನ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ’ ಎಂದು ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net