

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ನಂಜನಗೂಡು ತಾಲೂಕಿನ ಸುತ್ತೂರಿಗೆ ಆಗಮಿಸಿದ ಸಿಎಂ, ಅಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮ ಮುಗಿಸಿಕೊಂಡು ಸಿಎಂ ನೇರವಾಗಿ ಬೆಟ್ಟಕ್ಕೆ ಆಗಮಿಸಿದರು. ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಸಿಎಂಗೆ ಸಚಿವ ಎಸ್.ಟಿ. ಸೋಮಶೇಖರ್, ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸಾಥ್ ನೀಡಿದರು.