ಚಾಮುಂಡೇಶ್ವರಿ ದರ್ಶನ ಪಡೆದ ದರ್ಶನ್

mysore
Published on

ಮೈಸೂರು: ನಟ ದರ್ಶನ್ ಗುರುವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.

ಕುಟುಂಬ ಸದಸ್ಯರೊಂದಿಗೆ ಆಗಮಿಸಿದ ಅವರು, ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ವಿಜಯಲಕ್ಷ್ಮೀ ಹಾಗೂ ಸ್ನೇಹಿತರು ಈ ಸಂದರ್ಭದಲ್ಲಿದ್ದರು.

ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ದರ್ಶನ್ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು, ಕೋರ್ಟ್ ಅನುಮತಿ ಪಡೆದು ಮೈಸೂರಿಗೆ ಆಗಮಿಸಿದ್ದರು.

ಇದೀಗ ಅವರು ತಮ್ಮ ಫಾರ್ಮ್ ಹೌಸ್‌ನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net