ಚಾಮುಂಡೇಶ್ವರಿ: ಮತಗಟ್ಟೆಗಳಿಗೆ ಸಿಇಒ ಭೇಟಿ

ed81ddb8-0a99-4715-8653-822854c0f543
Published on

ವಿಧಾನಸಭಾ ಚುನಾವಣೆಯ ಮತದಾನ ಮೇ 10 ರಂದು ನಡೆಯುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮತಗಟ್ಟೆಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಗುರುವಾರ ಭೇಟಿ ನೀಡಿ ಮೂಲಸೌಕರ್ಯ ಪರಿಶೀಲನೆ ಮಾಡಿದರು.


ಗುಂಗ್ರಾಲ್ ಛತ್ರ ಗ್ರಾಪಂ ವ್ಯಾಪ್ತಿಯ ರಟ್ಟನಹಳ್ಳಿ, ನಾಗವಾಲ ಗ್ರಾಪಂ ವ್ಯಾಪ್ತಿಯ ಬೊಮ್ಮೇನಹಳ್ಳಿ, ಡಿ.ಎ.ಜಿ. ಹಳ್ಳಿ ಗ್ರಾಪಂ ವ್ಯಾಪ್ತಿಯ ಶೆಟ್ಟನಾಯಕನಹಳ್ಳಿ, ಧನಗಳ್ಳಿ ಗ್ರಾಪಂ ವ್ಯಾಪ್ತಿಯ ಎಡಹಳ್ಳಿ, ಉದ್ಬೂರು, ಇಲವಾಲ ಗ್ರಾಪಂ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿದರು.


ಮತಗಟ್ಟೆಗಳಲ್ಲಿ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಅನುಕೂಲವಾಗುವಂತೆ ಕಲ್ಪಿಸಿರುವ ರ‌್ಯಾಂಪ್, ಗಾಲಿಕುರ್ಚಿ ವ್ಯವಸ್ಥೆ, ಕುಡಿಯುವ ನೀರು, ನೆರಳು, ಶೌಚಗೃಹ ವ್ಯವಸ್ಥೆಯನ್ನು ಪರಿಶೀಲಿಸಿ ಮಾಹಿತಿ ಪಡೆದು, ಮತದಾನ ದಿನದಂದು ಯಾವುದೇ ಗೊಂದಲ ಉಂಟಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಮೈಸೂರು ತಾಲೂಕಿನ ಹೋಬಳಿ ಮಟ್ಟದಲ್ಲಿ ಮತದಾನ ಕುರಿತು ಅರಿವು ಮೂಡಿಸಲೆಂದು ಸಿದ್ಧಪಡಿಸಿದ ‘ಮತದಾನ ಜಾಗೃತಿ ರಥಕ್ಕೆ’ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದರು.


ಮೈಸೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಸೇರಿದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net