ಚಾರಿಟಬಲ್ ಟ್ರಸ್ಟ್‌ನಿಂದ ಶಾಲಾ ಶುಲ್ಕ ಪಾವತಿ

17M.D.R.1
ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ಪ್ರತಿಭಾನ್ವಿತ ಶಾಲಾ ವಿದ್ಯಾರ್ಥಿಗಳನ್ನು ಸಮಾಜ ಸೇವಕ ಕೆ.ಎಂ.ಉದಯ್ ಅಭಿನಂದಿಸಿದರು. ಶಿವರಾಮು, ಪ್ರಸನ್ನ, ವಿನೋದ, ತಿಮ್ಮೇಗೌಡ, ಕೆಂಪಣ್ಣ, ರಾಮಚಂದ್ರು ಇದ್ದರು.
Published on

ಮದ್ದೂರು; ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಮುಂಬರುವ ಶೈಕ್ಷಣಿಕ ವರ್ಷದಿಂದ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಭರಿಸಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ನಿಲುವಾಗಿಲು, ಹೊಸಕೆರೆ, ಬೆಸಗರಹಳ್ಳಿ, ಚಾಮನಹಳ್ಳಿ ಸೇರಿದಂತೆ ವಿವಿಧ ಸರ್ಕಾರಿ ಶಾಲೆಗಳ 5, 7 ಹಾಗೂ 10 ನೇ ತರಗತಿಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುರುವಾರ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಟ್ರಸ್ಟ್ ವತಿಯಿಂದ ಶಾಲಾ ಶುಲ್ಕವನ್ನು ಭರಿಸಲು ತೀರ್ಮಾನಿಸಲಾಗಿದೆ ಎಂದರು.

ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಹಲವಾರು ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇದನ್ನು ಅರಿತು ಟ್ರಸ್ಟ್ ವತಿಯಿಂದ ಈಗಾಗಲೇ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಡಿ.25 ರಂದು ಸರ್ಕಾರಿ ಮತ್ತು ಖಾಸಗಿ ಶಾಲಾ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶಿಕ್ಷಕರನ್ನೂ ಪ್ರೋತ್ಸಾಹಿಸಲಾಗುವುದು. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಟ್ರಸ್ಟ್ ಅನ್ನು ಸಂಪರ್ಕಿಸಿದರೆ ಆರ್ಥಿಕ ಸಹಾಯ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಲಿದೆ ಎಂದು ಭರವಸೆ ನೀಡಿದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವರಾಮು, ಗ್ರಾಪಂ ಸದಸ್ಯರಾದ ಪ್ರಸನ್ನ, ವಿನೋದ್, ಕದಲೂರು ತಿಮ್ಮೇಗೌಡ, ಮುಖಂಡರಾದ ಕೆಂಪಣ್ಣ, ಪುಟ್ಟಸ್ವಾಮಿ, ಮಾರಸಿಂಗನಹಳ್ಳಿ ರಾಮಚಂದ್ರು, ರವಿ, ವಿಜಯ್ ಕುಮಾರ್, ಅರುಣ್,ಶರತ್, ಅಮರ್, ಲೋಕೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net