ಚಾರ್ಮಾಡಿ ಘಾಟ್ ಹೆದ್ದಾರಿಗೆ ಬಿದ್ದ ಮರ

bnk rainn
ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಮರ ಬಿದ್ದಿರುವುದು.
Published on

ಬಣಕಲ್: ಚಾರ್ಮಾಡಿ ಘಾಟ್‌ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪ ಮರ ರಸ್ತೆಗೆ ಬಿದ್ದಿದ್ದು ಪ್ರಯಾಣಿಕರು ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಧರ್ಮಸ್ಥಳದಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಪ್ರವಾಸಿ ಕಾರು ಸಾಗಿದ ಕೆಲ ಸೆಕೆಂಡ್‌ಗಳ ಅಂತರದಲ್ಲಿ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳೀಯರಾದ ಮಧುಕುಮಾರ್, ಪ್ರವೀಣ್ ಪೂಜಾರಿ, ಬಣಕಲ್ ಪೊಲೀಸರು ಮರ ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net