ಚಾಲನಾ ಪರವಾನಗಿ ಪ್ರಮಾಣಪತ್ರ ವಿತರಣೆ

18raju2
ಚಾಮರಾಜನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾಹನ ಚಾಲನಾ ಪರವಾನಗಿ ಪಡೆದ ಮಹಿಳೆಯರಿಗೆ ಜಿಪಂ ಸಿಇಒ ಎಸ್.ಪೂವಿತಾ ಪ್ರಮಾಣಪತ್ರ ವಿತರಣೆ ಮಾಡಿದರು. ಪ್ರಭುಸ್ವಾಮಿ ಮತ್ತು ಇತರರು ಹಾಜರಿದ್ದರು.
Published on

ಚಾಮರಾಜನಗರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ವಾಹನ ತರಬೇತಿ ಪಡೆದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಎನ್‌ಆರ್‌ಎಲ್‌ಎಂ ಜಿಲ್ಲಾ ಘಟಕ ಹಾಗೂ ಸ್ವಚ್ಛ ಭಾರತ್ ಮಿಷನ್ ಸಹಯೋಗದೊಂದಿಗೆ ಶುಕ್ರವಾರ ನಗರದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಎಸ್.ಪೂವಿತಾ ಪ್ರಮಾಣ ಪತ್ರ ವಿತರಿಸಿದರು.

ಗ್ರಾಮ ಪಂಚಾಯಿತಿಯಲ್ಲಿನ ಘನತ್ಯಾಜ್ಯ ನಿರ್ವಹಣೆಯಲ್ಲಿ ಸ್ವ-ಸಹಾಯ ಸಂಘದ ಮಹಿಳೆಯರ ತಂಡ ಯಶಸ್ವಿಯಾಗಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸಲು ಕಾರ್ಯನಿರ್ವವಹಿಸಬೇಕು. ಇತರ ಸದಸ್ಯರು ವಾಹನ ತರಬೇತಿಗೆ ಬರುವಂತೆ ಹಾಗೂ ಘನ ತ್ಯಾಜ್ಯ ನಿರ್ವಹಣೆಗೆ ತೊಡಗಿಸಲು ಪ್ರೇರಣೆಯಾಗಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯಯೋಜನಾಧಿಕಾರಿ ಪ್ರಭುಸ್ವಾಮಿ ಮತ್ತು ಜಿಪಂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net