

ಚಿಂಚೋಳಿ: ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕಿರುಕುಳಗಳನ್ನು ತಡೆಯಲು ಮತ್ತು ಕಾನೂನ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಶಾಲೆಗಳಲ್ಲಿ ಫೋಸ್ಕೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ವಿದ್ಯಾರ್ಥಿ ಒಕ್ಕೂಟದ ತಾಲೂಕು ಅಧ್ಯಕ್ಷ ಯಲ್ಲಾಲಿಂಗ ದಂಡಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುವ ಪ್ರಕರಣಗಳುಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಪೋಷಕರು ತಮ್ಮ ಮಕ್ಕಳಿಗೆ ಶಾಲೆಗೆ ಕಳಿಸಲು ಭಯಪಡುವಂತಾಗಿದೆ. ಫೋಸ್ಕೋ ಕಾಯ್ದೆ ಜಾರಿಯಾಗಿ 10 ವರ್ಷಗಳೇ ಕಳೆದಿವೆ ಆದರೂ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳು ಕಡಿಮೆಯಾಗಿಲ್ಲ. ಆದ್ದರಿಂದ ಸರ್ಕಾರ ಎಲ್ಲಾ ಶಾಲೆಗಳಲ್ಲೂ ಪೋಸ್ಕೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಬೇಕು. ದೌರ್ಜನ್ಯ ತಡೆಗೆ ಮುಂದಾಗಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.