ಚಿಂಚೋಳಿ: ವೀರಭದ್ರೇಶ್ವರ ಸಹಕಾರ ಸಂಘದ ರಜತ ಮಹೋತ್ಸವ ಆ.30

IMG-20230826-WA0005
Published on

ಚಿಂಚೋಳಿ: ಪಟ್ಟಣದ ಪ್ರತಿಷ್ಠಿತ ಶ್ರೀ ವೀರಭದ್ರೇಶ್ವರ ಸಹಕಾರ ಬ್ಯಾಂಕನ್ ರಜತ್ ಮಹೋತ್ಸವಕ್ಕೆ ಸಿದ್ಧತೆ ಪೂರ್ಣಗೊಂಡಿದ್ದು, ಇದೆ 30 ರಂದು ಬೆಳಿಗ್ಗೆ 11.30ಕ್ಕೆ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬಸವರಾಜ ಮಾಲಿ ತಿಳಿಸಿದ್ದಾರೆ.ಈ ಕಾರ್ಯಕ್ರಮಕ್ಕೆ ಹಾರಕೂಡ ಶ್ರೀ ಮಠದ ಪೀಠಾಧಿಪತಿ ಶ್ರೀ ಡಾ. ಚನ್ನವೀರ ಶಿವಾಚಾರ್ಯರು, ಜಿಡಗಾ ದ ಷಡಕ್ಷರಿ ಶಿವಯೋಗಿ ಶ್ರೀ ಡಾ.ಮುರಘರಾಜೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕಾ ಖರ್ಗೆ, ವೈದ್ಯಕೀಯ ಶಿಕ್ಷಣಸಚಿವ ಡಾ.ಶರಣಪ್ರಕಾಶ ಪಾಟೀಲ್, ಶಾಸಕ ಡಾ. ಅವಿನಾಶ್ ಜಾಧವ್, ಮಾಜಿ ಶಾಸಕ ಕೈಲಾಸನಾಥ ಪಾಟೀಲ್, ಕಾಂಗ್ರೇಸ್ ಮುಖಂಡ ಸುಭಾಷ್ ರಾಠೋಡ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net