ಚಿಂಚೋಳಿ; ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಸನ್ಮಾನ

PH 02
Published on

ಚಿಂಚೋಳಿ; ಪ್ರಥಮ ಬಾರಿಗೆ ತಾಲೂಕಿಗೆ ಆಗಮಿಸಿದ ಸೇಡಂ ಶಾಸಕರೂ ಆದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರನ್ನು ಕಾಂಗ್ರಸ್​ ಕಾರ್ಯಕರ್ತರು ಸನ್ಮಾನಿಸಿದರು.

ಬಸವೇಶ್ವರ ವೃತ್ತದಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿ, ಸಚಿವರಿಗೆ ಅದ್ದೂರಿ ಸ್ವಾಗತ ಕೋರಿದರು. ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ತಾಲೂಕು ಅಧ್ಯಕ್ಷ ಸಂತೋಷ ಗುತ್ತೇದಾರ್​ ನೇತೃತ್ವದಲ್ಲಿ ಜೆಸಿಬಿ ಯಂತ್ರದ ಮೂಲಕ ಹೂ ಸುರಿಮಳೆ ಸುರಿಸಲಾಯಿತು.

ಕಾಂಗ್ರೇಸ್ ಮುಖಂಡ ಸುಭಾಷ್ ರಾಠೋಡ, ಅನೀಲಕುಮಾರ ಜಮಾದಾರ, ಶರಣು ಪಾಟೀಲ, ಅಬ್ದುಲ್ ಬಾಸೀದ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net