

ಚಿಂಚೋಳಿ: ಸಾಲಬಾಧೆಯಿಂದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕನಕಪೂರ ಗ್ರಾಮದಲ್ಲಿ ಶನಿವಾರ ಜರುಗಿದೆ.
ರೈತ ಮಲ್ಲೆಶಪ್ಪ ಕಲ್ಲಪ್ಪ (65) ಆತ್ಮಹತ್ಯೆಗೆ ಶರಣಾದ ರೈತ. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರಿದ್ದಾರೆ. 2 ಎಕರೆ ಜಮೀನಿದ್ದು, ಪಿಕೆಜಿಬಿ, ಕೃಷಿ ಪತ್ತಿನ ಸಹಕಾರ ಸಂಘ ಸೇರಿ ವಿವಿಧೆಡೆ ಸುಮಾರು 8 ಲಕ್ಷ ರೂ.ಗೂ ಅಧಿಕ ಸಾಲ ಮಾಡಿದ್ದ. ಅತಿವೃಷ್ಟಿ, ಅನಾವೃಷ್ಟಿಯಿಂದ ಬೆಳೆ ಹಾಳಾಗಿದ್ದು, ಮನನೊಂದು ವಿಷ ಸೇವಿಸಿದ್ದಾನೆ.
ಕೂಡಲೇ ಕಲಬುರಗಿಯ ಅಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನ ಹೊಂದಿದರು. ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.