ಚಿಂಚೋಳಿ; ಹೈಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ ಅದ್ದೂರಿ ಆಚರಣೆಗೆ ಸಿದ್ಧತೆ

PH 02
Published on

ಚಿಂಚೋಳಿ: ಕಲ್ಯಾಣ ಕರ್ನಾಟಕ ವಿಮೋಚನಾ ಹಾಗೂ ವಿಶ್ವಕರ್ಮ ಜಯಂತಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಗ್ರೇಡ್ 2 ತಹಸೀಲ್ದಾರ್ ವೆಂಕಟೇಶ ದುಗ್ಗನ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಹೈ.ಕ ವಿಮೋಚನಾ ಹಾಗೂ ವಿಶ್ವಕರ್ಮ ಜಯಂತಿ ನಿಮಿತ್ತ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸರ್ದಾರ್ ವಲ್ಲಭಭಾಯ್ ಪಟೇಲ್ ಹಾಗೂ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತಾಲೂಕು ಆಡಳಿತ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಎಲ್ಲರೂ ಹಾಜರಾಗಬೇಕು ಎಂದರು.

ರಾಷ್ಟ್ರಧ್ವಜ ಹಾರಿಸುವಾಗ ಯಾವುದೇ ತಪ್ಪುಗಳು ಉಂಟಾಗದಂತೆ ಎಚ್ಚರ ವಹಿಸಬೇಕು. 371 (ಜೆ) ರೂವಾರಿ ದಿ.ವೈಜನಾಥ ಪಾಟೀಲ್ ಸ್ಮಾರಕಕ್ಕೆ ತಾಲೂಕು ಆಡಳಿತದಿಂದ ವಿಶೇಷ ಪೂಜೆ ಸಲ್ಲಿಸಿ, ಸ್ಮರಿಸಬೇಕು. ಪ್ರಾಥಮಿಕ, ಪ್ರೌಢಶಾಲಾ ಮಕ್ಕಳು ಹೈ.ಕ ವಿಮೋಚನಾ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಸನ್ಮಾನಿಸುವುದರ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ರಾಠೋಡ, ತಾಲೂಕು ಆರೋಗ್ಯಾಧಿಕಾರಿ ಡಾ.ಮಹ್ಮದ ಗಫಾರ್, ಕ.ಸಾ.ಪ ಅಧ್ಯಕ್ಷ ಸುರೇಶ್ ದೇಶಪಾಂಡೆ, ಜಗದೀಶ್ಚಂದ್ರ ವಿಶ್ವಕರ್ಮ, ಮಲ್ಲಿಕಾರ್ಜುನ ವಿಶ್ವಕರ್ಮ, ಪ್ರಭು ಐನೋಳ್ಳಿ, ವಿಜಯಕುಮಾರ ಐನೋಳ್ಳಿ, ಮಲ್ಲಿಕಾರ್ಜುನ ಪಾಲಾಮೂರ, ಚಂದ್ರಕಾಂತ ಕೇರಳ್ಳಿ, ಶಾಮರಾವ ಚಿಂಚೋಳಿ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net