ಚಿಂಚೋಳಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ಮಾಡಿದ ತಾಪಂ ಇಒ

IMG-20230917-WA0010
Published on

ಚಿಂಚೋಳಿ: ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಬಳಿಕ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣ ಅಧಿಕಾರಿ ಶಂಕರ್ ರಾಠೋಡ್ ಧ್ವಜರೋಹಣ ನೆರವೇರಿಸಿ ಮಾತನಾಡಿ, ಸಾಕಷ್ಟು ಜನರ ಪ್ರಾಣತ್ಯಾಗದಿಂದ ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಬಲಿದಾನಗೈದ ಮಹನೀಯರನ್ನು ಸದಾ ಸ್ಮರಿಸೋಣ ಎಂದರು.

ತಾಪಂ ಕಾರ್ಯಾಲಯದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net