

ಚಿಂಚೋಳಿ: ತಾಲೂಕಿನ ರೋಡ ಕಲ್ಲೂರ, ಮಿರಿಯಾಣ ಸೇರಿದಂತೆ ವಿವಿಧೆಡೆ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸಂತೋಷ ಗುತ್ತೇದಾರ ದೂರಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಪರವಾನಿಗೆ, ಜೆಸ್ಕಾಂ ಇಲಾಖೆ ಪರವಾನಿಗೆ ಇಲ್ಲದೆ, ಟ್ರಾನ್ಸ್ ಫಾರ್ಮ್ ಅಳವಡಿಸಿಕೊಂಡು ಹಾಡು ಹಗಲೆ ಕ್ವಾರಿ ಕೊರೆದು ಭೂ ಸಂಪತ್ತು ಲೂಟಿ ಮಾಡುತ್ತಿದ್ದು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು, ಜೆಸ್ಕಾಂ ಅಧಿಕಾರಿಗಳು ಶಾಮಿಲಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದ್ದು, ಕೂಡಲೇ ಅಕ್ರಮ ಗಣಿಗಾರಿಕೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು. ಶಾಮಿಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.