

ಸಂಡೂರು: ಕುರೇಕುಪ್ಪ ಫಾರಂನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನೋಟಿಸ್ ನೀಡಿ ಚಿಕನ್ ಮತ್ತು ಮೊಟ್ಟೆ ಮಾರಾಟ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.
ಹೋಟೆಲ್, ರೆಸ್ಟೋರೆಂಟ್, ತಳ್ಳುವ ಗಾಡಿಗಳಲ್ಲಿ ಚಿಕನ್ ಮತ್ತು ಮೊಟ್ಟೆಗೆ ಸಂಬಂಧಿಸಿದ ಖಾದ್ಯ ನಿಷೇಧಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದ್ದು ಕಂಡುಬಂದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಕುರೇಕುಪ್ಪ ಪುರಸಭೆ ಮುಖ್ಯಾಧಿಕಾರಿ ಸತೀಶ್ ಗುಡ್ಡೆ ಎಚ್ಚರಿಸಿದ್ದಾರೆ.
ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಲಾಗುತ್ತಿದೆ. ಚಿಕನ್ ಮತ್ತು ಮೊಟ್ಟೆ ಮಾರಾಟ ಅಂಗಡಿಗಳ ಸುತ್ತಮುತ್ತಲಿನ ಚರಂಡಿ, ರಸ್ತೆಗಳಿಗೆ ಮಿಲಾತಿಯನ್ ಪೌಡರ್ ಸಿಂಪಡಣೆ ಮಾಡಲಾಗಿದೆ.