ಚಿಕಿತ್ಸಾ ಕೇಂದ್ರ ಆರಂಭಕ್ಕೆ ಸಿಎಂಗೆ ಮನವಿ - ಸಂಸದೆ ಅಂಗಡಿ

mangala angadi
Published on

ಬೆಳಗಾವಿ: ರಾಜ್ಯದಲ್ಲಿ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಬ್ಲ್ಯಾಕ್ ಂಗಸ್ ಚಿಕಿತ್ಸಾ ಕೇಂದ್ರ ಆರಂಭಿಸುವಂತೆ ಸಂಸದೆ ಮಂಗಲ ಅಂಗಡಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಉತ್ತರ ಕರ್ನಾಟಕದಲ್ಲಿ ಬ್ಲ್ಯಾಕ್ ಂಗಸ್‌ಗೆ ತುತ್ತಾಗಿರುವ ರೋಗಿಗಳು ಚಿಕಿತ್ಸೆ ಪಡೆಯಲು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ವ್ಯವಸ್ಥೆ ಇದೆ.

ಬೆಳಗಾವಿಯಲ್ಲೂ ಬ್ಲಾಕ್ ಫಂಗಸ್ ಪ್ರಕರಣ ವರದಿಯಾಗುತ್ತಿವೆ. ಆದ್ದರಿಂದ, ಶೀಘ್ರ ಚಿಕಿತ್ಸಾ ಕೇಂದ್ರ ಆರಂಭಕ್ಕೆ ಕ್ರಮ ವಹಿಸಿ ಈ ಭಾಗದ ಜನರಿಗೆ ನೆರವಾಗಬೇಕು ಎಂದು ಕೋರಿದರು. ಮನವಿಗೆ ಸ್ಪಂದಿಸಿದ ಸಿಎಂ ಶೀಘ್ರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net