ಚಿಕಿತ್ಸೆ ಪಡೆದು ಗುಣಮುಖರಾಗಿ

24 yerriswamy 01
Published on

ಬಳ್ಳಾರಿ : ಕ್ಷಯ ಎಂದು ಖಚಿತಪಟ್ಟಲ್ಲಿ, ಆರು ತಿಂಗಳು ಉಚಿತ ಚಿಕಿತ್ಸೆ ಪಡೆದು ಗುಣಮುಖರಾಗುವ ಮೂಲಕ ಕ್ಷಯಮುಕ್ತ ಜಿಲ್ಲೆಗಾಗಿ ಕೈಜೋಡಿಸಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶ ಬಾಬು ಕರೆ ನೀಡಿದರು.
ನಗರದ ಗುಗ್ಗರಹಟ್ಟಿ ವ್ಯಾಪ್ತಿಯ ಕ್ಷೇತ್ರಕ್ಕೆ ಸೋಮವಾರ ಭೇಟಿ ನಡೆಸಿ ಮಾತನಾಡಿದರು. ಯಾರಿಗಾದರೂ ಎರಡು ವಾರಗಳಿಗಿಂತ ಹೆಚ್ಚು ದಿನದ ಕೆಮ್ಮು, ಉಸಿರಾಟದಲ್ಲಿ ತೊಂದರೆ, ಸಂಜೆ ವೇಳೆ ಜ್ವರ, ರಾತ್ರಿ ವೇಳೆ ಮೈ ಬೆವರುವುದು, ಕಫದಲ್ಲಿ ರಕ್ತ ಬೀಳುವುದು, ಎದೆ ನೋವು, ಹಸಿವಾಗದಿರುವುದು, ತೂಕ ಇಳಿಕೆ ಸೇರಿದಂತೆ ಲಕ್ಷಣಗಳಿದ್ದವರು ತಮ್ಮ ಗಮನಕ್ಕೆ ಬಂದಲ್ಲಿ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕಳುಹಿಸಿ ಪರೀಕ್ಷೆ ಮಾಡಿಸಿ, ಬೇಗನೆ ರೋಗ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವಂತೆ ಸೂಚಿಸಬೇಕು ಎಂದರು. ಒಮ್ಮೆ ರೋಗ ಪತ್ತೆಯಾದರೆ ಅವರ ಚಿಕಿತ್ಸಾ ಅವಧಿ ಮುಗಿಯುವವರೆಗೆ ಮೇಲ್ವಿಚಾರಣೆ, ಅವರಿಗೆ ಬೆಂಬಲ ಹಾಗೂ ದಾನಿಗಳಿಂದ ಪೌಷ್ಟಿಕ ಆಹಾರ ವಿತರಿಸಲಾಗುತ್ತದೆ. ಮಕ್ಕಳಿಗೆ ಕ್ಷಯರೋಗ ಇದ್ದಲ್ಲಿ ಪಾಲಕರ ಮತ್ತು ಸುತ್ತಲಿನ ಮನೆಗಳ ಹಾಗೂ ಮಗುವಿಗೆ ಒಡನಾಟವಿರುವವರು ಪರೀಕ್ಷಿಸಿಕೊಳ್ಳಬೇಕು. ಮುಖ್ಯವಾಗಿ ಚಿಕಿತ್ಸೆ ನಿರ್ಲಕ್ಷಿಸಿದಲ್ಲಿ ರೋಗಿಯು ಬಹುಔಷಧಿ ರೋಗ ನಿರೋಧಕ ಕ್ಷಯರೋಗಿಯಾಗಿ ಎರಡು ವರ್ಷಗಳ ಕಾಲ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net