

ಸರಗೂರು : ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ಆಯತಪ್ಪಿ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾರೆ. ತಾಲೂಕಿನ ಹಾದನೂರು ಗ್ರಾಮದ ಮೂರ್ತಿ ಉಮೇಶ್(28) ಮೃತರು. ಹಾದನೂರು ಗ್ರಾಮದಿಂದ ಎಚ್.ಡಿ.ಕೋಟೆ ತಾಲೂಕಿನ ಯಲಮತ್ತೂರು ಗ್ರಾಮದ ಪತ್ನಿ ತವರು ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ನಿಲುವಾಗಿಲು ಗ್ರಾಮದ ಬಳಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಸವಾರನ ತಲೆಗೆ ತೀವ್ರ ಪೆಟ್ಟಾದ ಅತಿಯಾದ ರಕ್ತಸ್ರಾವವಾಗಿ ನರಳಾಡುತ್ತಿದ್ದುದ್ದನ್ನು ಕಂಡ ರೈತರು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಯಿತು.