

ಬಾಗಲಕೋಟೆ: ಇಂದಿನ ಮಕ್ಕಳು ನಾಳಿನ ಸಮಾಜದ ನಾಗರಿಕರು ಎನ್ನುವ ಮಾತಿಗೆ ಪೂರಕವಾಗಿ ಅತ್ಯುತ್ತಮ ಶಿಕ್ಷಣದ ಜೊತೆಗೆ ಅವರ ಆರೋಗ್ಯಕ್ಕೂ ಆದ್ಯತೆ ನೀಡಬೇಕಾದ ಅಗತ್ಯವಿದೆ. ಹಾನಗಲ್ಲ ಶ್ರೀಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕ್ಕಮಕ್ಕಳ ವಿಭಾಗ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಡಾ.ವೀರಣ್ಣ ಚರಂತಿಮಠ ಅವರ ಆಶಯದಂತೆ ಆಸ್ಪತ್ರೆಯಲ್ಲಿ ಚಿಕ್ಕಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಹೇಳಿದರು.
ಇಂಡಿಯನ್ ಓವರ್‌ಸಿಸ್ ಬ್ಯಾಂಕ್‌ನ ೮೯ ನೇ ಸಂಸ್ಥಾಪನಾ ದಿನದ ಪ್ರಯುಕ್ತ ಸೋಮವಾರ ಬ್ಯಾಂಕಿನ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದಲ್ಲಿ ಮಕ್ಕಳಿಗೆ ಹಣ್ಣು ಮತ್ತು ಸಿಹಿ ವಿತರಿಸಿ ಮಾತನಾಡಿದರು.
ಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕ್ಕಮಕ್ಕಳ ಚಿಕಿತ್ಸೆಗಾಗಿ ಅತ್ಯುತ್ತಮ ವಿಭಾಗವನ್ನು ಸ್ಥಾಪಿಸಲಾಗಿದೆ. ಈ ಮಕ್ಕಳ ವಿಭಾಗವು ಮಕ್ಕಳ ಸ್ನೇಹಿ ವಿಭಾಗವಾಗಿದ್ದು, ವೈದ್ಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳ ಚಿಕಿತ್ಸೆಗಾಗಿ ಸುಸಜ್ಜಿತ ಎನ್.ಐ.ಸಿ.ಯು, ಪಿ.ಆಯ್.ಸಿ.ಯು, ಕಾಕ್ಲಿಯರ್ ಇಂಪ್ಲ್ಯಾAಟ್ ಮತ್ತು ಉಚಿತ ಲಸಿಕೆ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಚಿಕ್ಕಮಕ್ಕಳ ವಿಭಾಗದಲ್ಲಿ ಸ್ತನ್ಯಪಾನವನ್ನು ಉತ್ತೇಜಿಸಲು ಕೈಗೊಳ್ಳಲಾದ ವಿಶೇಷ ಕಾರ್ಯಕ್ರಮಗಳು ಮತ್ತು ಯೋಜನೆಗಳಿಂದಾಗಿ ಆಸ್ಪತ್ರೆಗೆ ಸ್ತನ್ಯಪಾನಸ್ನೇಹಿ ಆಸ್ಪತ್ರೆ ಎಂದು ನವದೆಹಲಿಯ ರಾಷ್ಟಿçÃಯ ಮಾನ್ಯತಾ ಕೇಂದ್ರದಿAದ ಮಾನ್ಯತೆ ದೊರೆತಿದೆ. ಥಲಸ್ಸೇಮಿಯಾ ಮತ್ತು ಹಿಮೋಫಿಲಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗಾಗಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ಥಲಸ್ಸೇಮಿಯಾ ಮತ್ತು ಹಿಮೋಫಿಲಿಯಾ ಸೊಸೈಟಿ ಸ್ಥಾಪಿಸಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇಂಡಿಯನ್ ಓವರ್‌ಸಿಸ್ ಬ್ಯಾಂಕ್ ಹಲವು ಸಂದರ್ಭಗಳಲ್ಲಿ ಆಸ್ಪತ್ರೆಗೆ ದೇಣಿಗೆ ನೀಡಿ ತನ್ನ ಸಾಮಾಜಿಕ ಕಾಳಜಿಯನ್ನು ಮೆರೆದಿದೆ ಎಂದು ಹೇಳಿದರು.
ಈ ಸಂದರ್ಭ ಇಂಡಿಯನ್ ಓವರ್‌ಸಿಸ್ ಬ್ಯಾಂಕಿನ ಬಾಗಲಕೋಟೆ ಶಾಖೆಯ ಮ್ಯಾನೇಜರ್ ಶ್ರೀಮುರಳಿಧರ, ಎಸ್.ಎನ್.ಎಂ.ಸಿ ಶಾಖಾ ಮ್ಯಾನೇಜರ್ ಪ್ರವೀಣ ಪಾಠಕ್, ಸಹಾಯಕ ಮ್ಯಾನೇಜರ್ ವಿಪಿನ್ ಜೋಶಿ, ವೈದ್ಯಕೀಯ ಅಽÃಕ್ಷಕ ಡಾ.ಶ್ರೀರಾಮ ಕೋರಾ, ಚಿಕ್ಕಮಕ್ಕಳ ವಿಭಾಗದ ವೈದ್ಯರಾದ ಡಾ.ಅಶೋಕ ಬಡಕಲಿ, ಡಾ.ರಮೇಶ ಪೋಳ, ಡಾ.ವಿನಯ ಕುಮಾರ, ಡಾ.ಕೆಲುಡೆಪ್ಪಾ ತಳವಾರ, ಡಾ.ಗಂಗಾಧರ ಮಿರ್ಜಿ, ಡಾ.ಪಲ್ಲವಿ ಚರಂತಿಮಠ ಹಾಗೂ ಸಿಬ್ಬಂದಿ ಮತ್ತು ಮಕ್ಕಳ ಪಾಲಕರು ಉಪಸ್ಥಿತರಿದ್ದರು.