ಚಿಕ್ಕೂಸನಾಯಕ ಕುಟುಂಬಕ್ಕೆ ಆರ್ಥಿಕ ನೆರವು

29Rajesh1
Published on

ಚಾಮರಾಜನಗರ: ಸಂಬಳ ಸಿಗದೆ ಮನನೊಂದು ತಾಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ಕಚೇರಿ ಕಿಟಕಿಗೆ ನೇಣುಬಿಗಿದುಕೊಂಡು ಮೃತಪಟ್ಟ ನೀರಗಂಟಿ ಚಿಕ್ಕೂಸನಾಯಕ ಕುಟುಂಬಕ್ಕೆ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ (ಸಿಐಟಿಯು) ಆರ್ಥಿಕ ನೆರವು ನೀಡಲಾಯಿತು.

ಇತ್ತೀಚಿಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಸಂಘದ ಸದಸ್ಯರು ನೀರಗಂಟಿ ಚಿಕ್ಕೂಸನಾಯಕ ಆತ್ಮಕ್ಕೆ ಶಾಂತಿಕೋರಿ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ರಾಜ್ಯ ಉಪಾಧ್ಯಕ್ಷ ಜಿ.ರಾಮಕೃಷ್ಣ ಮಾತನಾಡಿ, ಚಿಕ್ಕೂಸನಾಯಕ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಉದ್ಯೋಗ ನೀಡಬೇಕೆಂದು ಒತ್ತಾಯಿಸಿದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಬರಗಿ ಸಿದ್ದರಾಜು, ಉಪಾಧ್ಯಕ್ಷ ಮತ್ತು ಸಿಐಟಿಯು ಜಿಲ್ಲಾ ಸಂಚಾಲಕ ಚಿಕ್ಕತುಪ್ಪೂರು ಎಂ.ಮಲ್ಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮ್ಮನಪುರ ಸುರೇಶ್, ಜಿಲ್ಲಾ ಮಾಧ್ಯಮ ಪ್ರತಿನಿಧಿ ಕೆ.ಜಿ.ವೆಂಕಟರಾಜು, ಚಾ.ನಗರ ತಾಲೂಕು ಅಧ್ಯಕ್ಷ ಕೃಷ್ಣ, ಯಳಂದೂರು ತಾಲೂಕು ಅಧ್ಯಕ್ಷೆ ಮಹದೇವಮ್ಮ, ಪ್ರಧಾನ ಕಾರ್ಯದರ್ಶಿ ಹಾಗೂ ಸಿಐಟಿಯು ಜಿಲ್ಲಾ ಸಂಚಾಲಕ ಕೃಷ್ಣನಾಯಕ್, ಗುಂಡ್ಲುಪೇಟೆ ತಾಲೂಕು ಉಪಾಧ್ಯಕ್ಷ ಲೋಕೇಶ್, ಪ್ರಧಾನ ಕಾರ್ಯದರ್ಶಿ ಅಣ್ಣೂರು ಸಿದ್ದರಾಜು, ಮಾಜಿ ಅಧ್ಯಕ್ಷ ತೆಕಣಾಂಬಿ ಮಂಜು, ನಂದೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net