ಚಿಗತಾಪುರ ಸಂಪರ್ಕ ರಸ್ತೆ ಗುಂಡಿಮಯ

18 HANUR 4
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ತಾಲೂಕಿನ ಅಜ್ಜೀಪುರ ಭಾಗದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಚಿಗತಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಮಯವಾಗಿದೆ. ಪರಿಣಾಮ ಅಲ್ಲಲ್ಲಿ ನೀರು ನಿಲ್ಲುವಂತಾಗಿದ್ದು, ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅಜ್ಜೀಪುರದಿಂದ ಚಿಗತಾಪುರ ಗ್ರಾಮದ ಮೂಲಕ ಎಲ್ಲೇಮಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯು ಹಾಳಾಗಿದ್ದು, ಜಲ್ಲಿಕಲ್ಲುಗಳು ಅಲ್ಲಲ್ಲಿ ಹರಡಿಕೊಂಡಿವೆ. ಇದರಿಂದ ವಾಹನ ಸವಾರರು ಸಂಚರಿಸಲು ತುಂಬಾ ತೊಂದರೆ ಎದುರಿಸುತ್ತಿದ್ದಾರೆ. ಅಲ್ಲದೆ ರಾತ್ರಿ ಸುಮಾರು 2 ಗಂಟೆಗಳ ಕಾಲ ಮಳೆಯಾದ್ದರಿಂದ ಈ ಮಾರ್ಗದ ರಸ್ತೆಯ ಗುಂಡಿಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡುವಂತಾಯಿತು.

ಕಳೆದ ಹಲವು ವರ್ಷದಿಂದಲೂ ಈ ರಸ್ತೆಯು ಹದಗೆಟ್ಟಿದ್ದು, ಗುಂಡಿಗಳು ನಿರ್ಮಾಣವಾಗಿದೆ. ಇದರಿಂದ ಬೈಕ್ ಸವಾರರು ಸಂಚರಿಸಬೇಕಾದರೆ ತುಂಬಾ ತೊಂದರೆ ಪಡಬೇಕಿದೆ. ಮಳೆಗಾಲದಲ್ಲಂತೂ ಗುಂಡಿಗಳಲ್ಲಿ ನೀರು ನಿಲ್ಲುತ್ತದೆ. ಇದರಿಂದ ಸಂಚರಿಸಲು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಗ್ರಾಮದ ಮುಖಂಡ ಮಾದೇವ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net