ಚಿತ್ತಾಪುರದ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

PH 07
Published on

ಚಿತ್ತಾಪುರ: ಇಲ್ಲಿಯ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ಅನುಶ್ರೀ ಜಗದೀಶ ತಾಲೂಕು ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಗುರು ರಮೇಶ ಯಾದವಾಡ ತಿಳಿಸಿದ್ದಾರೆ.

ವಿದ್ಯಾರ್ಥಿ ಅನುಶ್ರೀ ಅವರಿಗೆ ಶಾಲೆಯ ಆಡಳಿತ ಮಂಡಳಿವತಿಯಿಂದ ಸೋಮವಾರ ಸನ್ಮಾನಿಸಿ, ಪ್ರೋತ್ಸಾಹಿಸಲಾಯಿತು. ಮುಂದಿನ ಹಂತದಲ್ಲೂ ಅತ್ಯುತ್ತಮ ಸಾಧನೆ ಮಾಡಿ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಲಿ ಎಂದು ಹಾರೈಸಿದರು.

ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಅಧ್ಯಕ್ಷ ಶ್ರೀನಿವಾಸ ಪೆಂದು, ಮುಖ್ಯಗುರು ರಮೇಶ ಯಾದವಾಡ, ದೈಹಿಕ ಶಿಕ್ಷಕ ಅಂಬರೀಶ, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net