ಚಿತ್ರದುರ್ಗ ಜಿಲ್ಲೆಗೆ ಮೂರು ಪ್ರಶಸ್ತಿಗಳ ಗರಿ

ceo1-000004
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಚಿತ್ರದುರ್ಗ: ಕೃಷಿ ಕ್ಷೇತ್ರದಲ್ಲಿನ ಉತ್ತಮ ಸಾಧನೆಗಾಗಿ ಚಿತ್ರದುರ್ಗ ಜಿಲ್ಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.
2023-24ನೇ ಸಾಲಿನಲ್ಲಿ ಕೃಷಿ ಇಲಾಖೆ ಮಣ್ಣು ಪರೀಕ್ಷಾ ಪ್ರಯೋಗಾಲಯಕ್ಕೆ ಪ್ರಥಮ ಹಾಗೂ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಅದರಂತೆ ನರೇಗಾದಲ್ಲಿನ ಅತ್ಯುತ್ತಮ ಸಾಧನೆಗಾಗಿ ಪ್ರಥಮ ಸ್ಥಾನಕ್ಕೆ ಭಾಜನವಾಗಿದೆ.
ಈಚೆಗೆ ಬೆಂಗಳೂರಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮುಂಗಾರು ಹಂಗಾಮು ಕಾರ್ಯಾಗಾರದಲ್ಲಿ ಪ್ರಶಂಸನಾ ಪತ್ರಗಳನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಗಳಿಗೆ ಭಾಜನವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿ ಜಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅವರನ್ನು ಬುಧವಾರ ಭೇಟಿ ಮಾಡಿ ಅಭಿನಂದಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಕೃಷಿ ಉಪನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಕುಮಾರ್, ಅಶೋಕ್, ಪ್ರಕಾಶ್, ಮಂಜುನಾಥ್, ಕೆ.ಟಿ.ಮಂಜುನಾಥ್, ರಂಜಿತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net