ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ

arrested
Published on

ಮೈಸೂರು: ಸಬರ್ಬನ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬಳಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ 12 ಲಕ್ಷ ರೂ. ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಡಿ.16ರಂದು ಪ್ರಯಾಣಿಕರೊಬ್ಬರು ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿಟ್ಟುಕೊಂಡಿದ್ದ 184 ಗ್ರಾಂ ಚಿನ್ನದ ಒಡವೆಗಳು ಕಳ್ಳತನವಾಗಿತ್ತು. ಆರೋಪಿ ಮತ್ತು ಮಾಲು ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ.

ಲಷ್ಕರ್ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಆರ್.ಪ್ರಸಾದ್, ಪಿಎಸ್‌ಐ ಎಂ.ರಾಧಾ, ಅನಿಲ್‌ಕುಮಾರ್, ಸಿಬ್ಬಂದಿ ಸುರೇಶ, ರವಿಕುಮಾರ್, ಗಿರೀಶ್, ಮಂಜುನಾಥ, ಚೌಡಪ್ಪ, ಪಾಸೀಗರ್, ಅಬ್ದುಲ್ ರೆಹಮಾನ, ಅಶ್ವಿನಿ ಹಳವಾರ ಹಾಗೂ ತಾಂತ್ರಿಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net