ಚಿನ್ನಾಭರಣ ಮಳಿಗೆ ಕಳ್ಳತನಕ್ಕೆ ಯತ್ನ

Screenshot_20201030-153226_Video Player
Published on

ವಿಜಯಪುರ: ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದ್ದು, ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ರಾತ್ರಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಮುಖ್ಯ ಬಜಾರ್ ನಲ್ಲಿರುವ ಚಿನ್ನದ ಅಂಗಡಿಯಲ್ಲಿ ಘಟನೆ ನಡೆದಿದೆ. ಶ್ರೀನಿವಾಸ ನಾರಾಯಣ ಯಲ್ಲೂರ ಎಂಬುವರಿಗೆ ಸೇರಿದ ಚಿನ್ನದ ಅಂಗಡಿಯಲ್ಲಿ ಘಟನೆ ನಡೆದಿದೆ. ಚಿನ್ನದ ಅಂಗಡಿಯಲ್ಲಿ ಕಳ್ಳತನ ಬಗ್ಗೆ ಸಂಶಯ ಬಂದ ಹಿನ್ನೆಲೆ ಅಲ್ಲಿನ ಗೂರ್ಖಾ ಬಹದ್ದೂರ್ ಎಂಬಾತ ಸಮಯಪ್ರಜ್ಞೆ ಮೆರೆದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net