

ಚಿತ್ರದುರ್ಗ: ನಗರದ ಯೋಗಾಸನ,ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ಎಲ್.ಎಸ್.ಚಿನ್ಮಯಾನಂದ ಅವರು,ಬೆಂಗಳೂರಿನ ಸಮರ್ಥ ಸಾಹಿತ್ಯಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ‘ಕೆಂಗಲ್‌ಹನುಮಂತಯ್ಯ’ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರಂ ಕಾಂಪೋಜಿಟ್ ಕಾಲೇಜಿನಲ್ಲಿ ಅ.15ರಂದು ಬೆಳಗ್ಗೆ 10.30ಕ್ಕೆ ಏರ್ಪಡಿಸಿರುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ.ಕೃಷ್ಣಗೌಡ ಉದ್ಘಾಟಿಸುವರು. ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್‌ಜೋಶಿ ಅಧ್ಯಕ್ಷತೆ ವಹಿಸುವರು.
ವಿಜಯವಾಣಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಚನ್ನೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡುವರು.ಮುಖ್ಯಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಧರಣಿದೇವಿ,ಬೆಂಗಳೂರಿನ ರಮಣಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್.ಷಡಕ್ಷರಿ,ತುಮಕೂರು ಆರ್ಯವೈಶ್ಯ ಅಧಿಕಾರಿಗಳ ಮತ್ತು ವೃತ್ತಿ ನಿರತರ ಸಂಘದ ಅಧ್ಯಕ್ಷ ಡಿ.ಸುಬ್ರಮಣ್ಯಶೆಟ್ಟಿ ಆಗಮಿಸುವರು. ಪ್ರತಿಷ್ಠಾನದ ಅಧ್ಯಕ್ಷ ರಾ.ವಿಜಯಸಮರ್ಥ ಉಪಸ್ಥಿತರಿರುವರು.