ಹುಲಿಯೂರುದುರ್ಗ: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಎಲೆಕಡಕಲು ಗ್ರಾಮದಲ್ಲಿ ಲೋಕೇಶ್ ಎಂಬುವವರ ಮನೆಯಲ್ಲಿ ಕಟ್ಟಿದ್ದ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ್ದು, ಎಮ್ಮೆ ಕರು ಮೃತಪಟ್ಟಿದೆ. ಕಳೆದೊಂದು ತಿಂಗಳಿನಿಂದ ನಿರತಂತರವಾಗಿ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮದಲ್ಲಿ ವಿದ್ಯುತ್ ದೀಪಗಳು ಇಲ್ಲದ ಹಾಗೂ ರಾತ್ರಿ ವೇಳೆಯಲ್ಲಿ ಸರಿಯಾಗಿ ವಿದ್ಯುತ್ ನೀಡದ ಕಾರಣ ಈ ರೀತಿ ಟನೆಗಳು ಮರು ಕಳಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದು, ಚಿರತೆ ಸೆರೆಗೆ ಆಗ್ರಹಿಸಿದ್ದಾರೆ.