ಚಿರತೆಗಳ ಸೆರೆಗೆ ಬೋನು ಅಳವಡಿಕೆ

9-pnp 4
Published on

ಪಾಂಡವಪುರ: ತಾಲೂಕಿನ ಬನ್ನಂಗಾಡಿ ಗ್ರಾಮದ ಸುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿ ಸೆರೆಗೆ ಕ್ರಮ ಕೈಗೊಂಡಿದ್ದಾರೆ.

ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಿದ್ದು, ಹಗಲಲ್ಲೇ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿವೆ. ಕೂಡಲೇ ಚಿರತೆಗಳನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಚಿರತೆಗಳ ಚಲನ-ವಲನ ಮತ್ತು ಹೆಜ್ಜೆಗಳ ಗುರುತು ಅನುಸರಿಸಿ ಗ್ರಾಮದ ಸುತ್ತಲಿನ ಮೂರು ಕಡೆ ಜೀವಂತ ನಾಯಿಗಳ ಸಮೇತ ಬೋನು ಇರಿಸಿ ಸೆರೆ ಹಿಡಿಯಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net