ಚುಡಾ ಕಚೇರಿಯಲ್ಲಿ ಧ್ವಜಾರೋಹಣ

15Rajesh13
Published on

ಚಾಮರಾಜನಗರ: ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಆವರಣದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ನೆರವೇರಿಸಿದರು.

ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ನಂತರ ಮಾತನಾಡಿ, ಅನೇಕ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. 79 ನೇ ವರ್ಷ ಆಚರಣೆ ಮಾಡುತ್ತಿರುವ ನಾವೆಲ್ಲರೂ ಸ್ವಾತಂತ್ರ್ಯ ಸೇನಾನಿಗಳ ಸ್ಮರಿಸಿಕೊಂಡು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಂಡು ಅಭಿವೃದ್ದಿಯತ್ತ ಸಾಗೋಣ ಎಂದರು. ಪ್ರಾಧಿಕಾರದ ಸದಸ್ಯರಾದ ರಾಜು, ಪುಟ್ಟಸ್ವಾಮಿ, ದ್ವಾರಕಿ, ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ನಿರ್ದೇಕ ರಿತೀಶ್, ರೆಹಮನ್‌ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net