ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳಿಂದ ಶ್ರಮದಾನ

From Markal G.P. Swachhata Abhiyan At Chikkpet Photo
Published on

ಬೀದರ್: ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಬೀದರ್ ತಾಲ್ಲೂಕಿನ ಮರಕಲ್ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶ್ರಮದಾನ ಮಾಡಿದರು.
ಪಂಚಾಯಿತಿ ವ್ಯಾಪ್ತಿಯ ಚಿಕ್ಕಪೇಟೆ ಹಾಗೂ ಬೆನಕನಳ್ಳಿ ಗ್ರಾಮಗಳಲ್ಲಿ ಕೈಯಲ್ಲಿ ಪೊರಕೆ ಹಿಡಿದು, ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಪಿಡಿಒ ಉಮೇಶ ಜಾಬಾ ಚರಂಡಿ ಶುಚಿಗೊಳಿಸಿ, ಗಮನ ಸೆಳೆದರು. ಮಕ್ಕಳು, ಯುವಕರು, ಸಾರ್ವಜನಿಕರಿಗೆ ಸ್ವಚ್ಛತೆ ಕುರಿತು ತಿಳಿವಳಿಕೆಯನ್ನೂ ನೀಡಿದರು.
ಸೆ. 15 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರಮದಾನ, ಸ್ವಚ್ಛತೆ ಜಾಗೃತಿ ಮೊದಲಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ವೈಜಿನಾಥ ಕಾಂಬಳೆ, ಮೆಹಬೂಬ್, ಕಾರ್ಯದರ್ಶಿ ಜೀತೇಂದ್ರ ಹಾಗೂ ಸಿಬ್ಬಂದಿ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net