ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ

CTD 25 KCVeerendra MLA
Published on

ಚಿತ್ರದುರ್ಗ: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಗರದ ವೀರ ವನಿತೆ ಒನಕೆ ಓಬವ್ವ ವೃತ್ತದಲ್ಲಿ ಪಟಾಕಿ ಸಿಡಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ವಿಚಾರಣೆ ಸೋಮವಾರ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯಿತು. ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರಪಪ್ಪಿ ಮತ್ತವರ ಬೆಂಬಲಿಗರ ಸಹಿತ ಏಳು ಮಂದಿ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ಸಾಕ್ಷಿಗಳ ಹೇಳಿಕೆ ದಾಖಲಿಸಿದ ಪ್ರಧಾನ ಸಿವಿಲ್ ನ್ಯಾಯಾಲಯದ(ಕಿರಿಯ ವಿಭಾಗ)ನ್ಯಾಯಾಧೀಶೆ ರಶ್ಮಿ ಎಸ್. ಮರಡಿ ಅವರು ವಿಚಾರಣೆಯನ್ನು ಮೇ 3ಕ್ಕೆ ಮುಂದೂಡಿದರು. ಶಾಸಕರ ಸಹಿತ ಎಲ್ಲ ಏಳು ಮಂದಿ ಕೋರ್ಟಿಗೆ ಹಾಜರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net