ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

DC Jyothsna New
Published on

ಕಲಬುರಗಿ: ಮತದಾನದ ನಂತರ ಮತಪೆಟ್ಟಿಗೆ ಇಡಲು ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ ಸ್ಥಾಪಿಸಿ, ಅಗತ್ಯ ಪೊಲೀಸ್ ಭದ್ರತೆ ಒದಗಿಸಬೇಕು. ಇಲ್ಲಿಯೇ ಮತ ಎಣಿಕೆ ನಡೆಯುವುದರಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಟ್ಟಡದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೂಚನೆ ನೀಡಿದರು.
ಆಳಂದ ಸಕರ್ಾರಿ ಬಾಲಕರ ಪದವಿ ಪೂರ್ವ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ಮತ ಪೆಟ್ಟಿಗೆಯ ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ಸ್ಥಳ ಪರಿಶೀಲಿಸಿದ ಅವರು, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಲ್ಲದೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಹಸೀಲ್ದಾರ್ ಕಚೇರಿಗೂ ಭೇಟಿ ನೀಡಿ, ಚುನಾವಣೆ ಸಂಬಂಧ ನಡೆಯುತ್ತಿರುವ ಪೂರ್ವಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.
ಖಜೂರಿ ಮತ್ತು ಕಿಣ್ಣಿ ಸುಲ್ತಾನ ಗ್ರಾಮದ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಮತದಾರರ ಪಟ್ಟಿ ದೋಷ ರಹಿತವಾಗಿರುವಂತೆ ಬಿಎಲ್ಒ ಅಧಿಕಾರಿಗಳು ನೋಡಿಕೊಳ್ಳಬೇಕು. ಶೌಚಗೃಹ, ರ್ಯಾಂಪ್, ವಿದ್ಯುತ್ ಸೇರಿ ಕಟ್ಟಡದಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡಬೇಕು. ಸಣ್ಣ ಪುಟ್ಟ ದುರಸ್ತಿಗಳಿದ್ದಲ್ಲಿ ಕೂಡಲೇ ಮಾಡಿಕೊಂಡು ಮತದಾನ ಸಮಯಕ್ಕೆ ಯಾವುದೇ ತೊಂದರೆ ಇಲ್ಲದಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ತಹಸೀಲ್ದಾರ್ ಯಲ್ಲಪ್ಪ ಸುಬೇದಾರ ಹಾಗೂ ಇತರೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net