ಚುನಾವಣೆಯಲ್ಲಿ ಲೋಪಕ್ಕೆ ಆಸ್ಪದ ಬೇಡ : ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚನೆ

27CBP3 (2)
Published on

ಚಿಕ್ಕಬಳ್ಳಾಪುರ : ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿನ ಸಭಾಂಗಣದಲ್ಲಿ ಬುಧವಾರ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಸಂಬಂಧ ಪೂರ್ವಭಾವಿ ಸಿದ್ಧತೆಯ ಸಭೆಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಈಗಾಗಲೇ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಪಂಚಾಯತ್ ವಾರು ಅಧಿಕಾರಿಗಳನ್ನು ನೇಮಿಸಲಾಗಿದೆ. ಮೀಸಲಾತಿ ನಿಗದಿ, ಆಯ್ಕೆಗೆ ಸಂಬಂಧಿಸಿದಂತೆ ಪ್ರಕ್ರಿಯೆಗಳ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ. ಅದರಂತೆ ಪ್ರತಿಯೊಬ್ಬರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಿಗದಿಪಡಿಸಿದ ಸ್ಥಳದಲ್ಲಿ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಳ್ಳಲಿದೆ. ಸಂಬಂಧಪಟ್ಟ ಇಲಾಖೆ ಸಿಬ್ಬಂದಿ ಕುಡಿಯುವ ನೀರು, ಶೌಚಗೃಹ ಸೇರಿ ಅಗತ್ಯ ಸವಲತ್ತು ಒದಗಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು.

152 ಗ್ರಾ.ಪಂ.ವ್ಯಾಪ್ತಿಯಲ್ಲಿನ ಸದಸ್ಯರು ಆಯಾ ತಾಲೂಕು ಮಟ್ಟದ ಸಭೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕರೊನಾ ಮಾರ್ಗಸೂಚಿ ಪಾಲನೆಯ ಕಡೆಗೂ ಹೆಚ್ಚಿನ ನಿಗಾ ವಹಿಸಬೇಕು. ಇದರ ವಿಚಾರವಾಗಿ ತಾಪಂ ಇಒ ಮತ್ತು ತಹಸೀಲ್ದಾರ್ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಯಾರೇ ಆಗಲಿ ನಿರ್ಲಕ್ಷೃ ವಹಿಸಿದಲ್ಲಿ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಜಿ.ಪಂ.ಮುಖ್ಯ ಯೋಜನಾ ನಿರ್ದೇಶಕಿ ಧನುರೇಣುಕಾ, ಉಪ ಕಾರ್ಯದರ್ಶಿ ನೋಮೇಶ್, ಶಿರಸ್ತೇದಾರ್ ಮೈಕಲ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net