ಚೂರಿ ಹಾಕಿದವರಿಗೆ ಪ್ರಶಸ್ತಿ ಗರಿ

SRINIVAS PRASAD
Published on

ಮೈಸೂರು : ಡಿ.ದೇವರಾಜ ಅರಸು ಅವರ ಜತೆಯಲ್ಲೇ ಇದ್ದು ರಾತ್ರೋರಾತ್ರಿ ಚೂರಿ ಹಾಕಿದವರಿಗೆ ಅವರ ಹೆಸರಿನಲ್ಲಿ ಪ್ರಶಸ್ತಿ ಕೊಡುತ್ತಿರುವುದು ನೋಡಿ ನಗು ಬರುತ್ತಿದೆ ಎಂದು ಪರೋಕ್ಷವಾಗಿ ಎಚ್.ವಿಶ್ವನಾಥ್ ಅವರನ್ನು ಸಂಸದ ವಿ.ಶ್ರೀನಿವಾಸಪ್ರಸಾದ್ ಲೇವಡಿ ಮಾಡಿದರು. ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದನ್ನು ನಾನು ಖಂಡಿಸುತ್ತೇನೆ. ಸಂವಿಧಾನ ಹುದ್ದೆಯಲ್ಲಿರುವವರಿಗೆ ಈ ರೀತಿ ಅವಮಾನ ಮಾಡುವುದು ಸರಿಯಲ್ಲ ಎಂದರು. ನಂಜನಗೂಡಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಮಾಜಿ ಸಿಎಂ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net