ಚೆಕ್ ಬೌನ್ಸ್ ಪ್ರಕರಣ: ಚಲನಚಿತ್ರ ನಟ ನಿನಾಸಂ ಅಶ್ವಥ್ ಬಂಧನ.

ಚೆಕ್ ಬೌನ್ಸ್ ಪ್ರಕರಣ: ಚಲನಚಿತ್ರ ನಟ ನಿನಾಸಂ ಅಶ್ವಥ್ ಬಂಧನ.
Published on

ಹಾಸನ: ಚೆಕ್ ಬೌನ್ಸ್ ಕೇಸ್ ಪ್ರಕರಣದಲ್ಲಿ ಚಲನಚಿತ್ರ ನಟ ನಿನಾಸಂ ಅಶ್ವಥ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಹಾಸನ ಮೂಲದ ರೋಹಿತ್ ಎಂಬುವವರಿಂದ ನಟ ಅಶ್ವಥ್ ಹಸುಗಳನ್ನ ಖರೀದಿ ಮಾಡಿ 1.5 ಲಕ್ಷದ ಚೆಕ್ ನೀಡಿದ್ದರು. ರೋಹಿತ್ ಬ್ಯಾಂಕ್‌ಗೆ ಚೆಕ್ ಹಾಕಿದಾಗ ಬೌನ್ಸ್ ಆಗಿತ್ತು. ಈ ಸಂಬಂಧ ರೋಹಿತ್ ಹಾಸನದ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಕೇಸ್ ಹಾಕಿದ್ದು, ಕೋರ್ಟ್ ನಾಲ್ಕು ಬಾರಿ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ನಾಲ್ಕೂ ಬಾರಿಯೂ ನಟ ಅಶ್ವಥ್ ಕೋರ್ಟ್‌ಗೆ ಹಾಜರಾಗಿರಲಿಲ್ಲ.

ಐದನೇ ಬಾರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನಲೆಯಲ್ಲಿ ಬಡಾವಣೆ ಠಾಣೆ ಪೊಲೀಸರು ನಿನ್ನೆ ರಾತ್ರಿ ಅಶ್ವಥ್‌ನನ್ನು ಬಂಧಿಸಿ ನ್ಯಾಯಲಯ ಮುಂದೆ ಹಾಜರುಪಡಿಸಲಾಗಿದ್ದು, ತಪ್ಪೊಪ್ಪಿಕೊಂಡ ಈಗಲೇ ಶೇ.25 ರಷ್ಟು ಹಣ ಪಾವತಿಸಿ. ಉಳಿದ ಹಣ ನೀಡಲು ನ್ಯಾಯಾಧೀಶರಿಂದ ಸಮಯ ಪಡೆದಿದ್ದಾರೆ . ಶೇ.25 ರಷ್ಟು ಹಣ ಪಾವತಿ ಮಾಡಿದ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಅಶ್ವಥ್‌ನನ್ನು ಬಿಡುಗಡೆ ಮಾಡಲಾಗಿದೆ ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net