ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ

09-GPT-4
ಗುಂಡ್ಲುಪೇಟೆ ಗಡಿಯ ಕೆಕ್ಕನಹಳ್ಳ ಚೆಕ್ ಪೋಸ್ಟ್ ಸಿಬ್ಬಂದಿ ತಾಲೂಕಿಗೆ ಆಗಮಿಸುವ ಎಲ್ಲ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡುತ್ತಿದ್ದಾರೆ.
Published on

ಗುಂಡ್ಲುಪೇಟೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳ ಹಾಗೂ ತಮಿಳುನಾಡಿನಿಂದ ಪ್ರವೇಶಿಸುವ ಎಲ್ಲ ವಾಹನಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗಿದೆ.

ಅಕ್ರಮ ಹಣ ಸಾಗಣೆ ತಡೆಗಟ್ಟಲು ಅಲ್ಲಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ತಪಾಸಣೆ ಕೈಗೊಳ್ಳಲಾಗಿದೆ. ಕೇರಳದ ಸುಲ್ತಾನ್ ಭತ್ತೇರಿ ರಸ್ತೆಯ ಮೂಲೆಹೊಳೆ ಹಾಗೂ ಊಟಿ ರಸ್ತೆಯ ಕೆಕ್ಕನಹಳ್ಳ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾದ ಅಧಿಕಾರಿಗಳ ಜತೆಗೆ ಅರಣ್ಯ, ಪೊಲೀಸ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಬೈಕ್, ಕಾರು, ಸರಕು ಸಾಗಣೆ ಹಾಗೂ ಪ್ರಯಾಣಿಕರ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸುತ್ತಿದ್ದಾರೆ. ಅನುಮಾನ ಬಂದ ವಾಹನಗಳನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net