

ಹುಬ್ಬಳ್ಳಿ: ಗಬ್ಬೂರ ಹಾಗೂ ತಡಸ ಬಳಿಯ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನ್ ಮಾಡಬೇಕು. ಅಧಿಕೃತ ಪಾಸ್ ಇಲ್ಲದೆ ಪ್ರಯಾಣಿಸುವವರಿಗೆ ಅವಕಾಶ ನೀಡಬಾರದು ಎಂದು ಚೆಕ್ಪೋಸ್ಟ್ನಲ್ಲಿನ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಧಾರವಾಡ ಜಿಲ್ಲೆ ಹಾಗೂ ಹುಬ್ಬಳ್ಳಿಗೆ ಆಗಮಿಸುವರಿಗೆ ಥರ್ಮಲ್ ಸ್ಕ್ಯಾನ್ ಮಾಡಿ ಕ್ವಾರಂಟೈನ್ ಸೀಲ್ ಹಾಕಬೇಕು. ಜ್ವರ ಹಾಗೂ ಇತರ ಲಕ್ಷಣಗಳು ಕಂಡುಬಂದವರಿಗೆ ಕಿಮ್ಸ್ ಸೇರಿ ಇತರೆಡೆ ಕೋವಿಡ್-19 ಪರೀಕ್ಷೆ ಮಾಡಿಸಲು ಕಳುಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಪಂ ಸಿಇಒ ಡಾ. ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಹುಬ್ಬಳ್ಳಿ ನಗರ ತಹಸೀಲ್ದಾರ್ ಶಶಿಧರ ಮಾಡ್ಯಾಳ, ಇತರರಿದ್ದರು.