

ಮೈಸೂರು: ಚೈತನ್ಯದಾಯಕ ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ ಎಂದು ಬಲ್ಲನೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸಿ.ಆರ್. ದಿನೇಶ್ ಹೇಳಿದರು.
ನಗರದ ಎಸ್‌ಬಿಆರ್‌ಆರ್ ಮಹಾಜನ ಕಾನೂನು ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದ ಅವರು, ಯುವಜನರನ್ನು ಸದೃಢ ಪ್ರಜೆಗಳನ್ನಾಗಿ ರೂಪಿಸುವುದೇ ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವಾಗಿದೆ. ಹಾಗಾಗಿ ಯುವಜನರು ವಿದ್ಯಾರ್ಜನೆಯ ಜತೆಗೆ ಎನ್‌ಎಸ್‌ಎಸ್‌ಗೆ ಸೇರ್ಪಡೆಗೊಂಡು ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿವಿಧತೆಯಲ್ಲಿ ಏಕತೆಯ ಮಂತ್ರಕ್ಕೆ ಬದ್ಧರಾಗಿ ಎಲ್ಲರೊಡನೆ ಬೆರೆಯಬೇಕು. ಸಂಕುಚಿತ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಒಳಗಾಗಬಾರದು. ಚುನಾವಣೆಯಲ್ಲಿ ಸಚ್ಚಾರಿತ್ರೃದ ಅಭ್ಯರ್ಥಿಯನ್ನು ಯಾವುದೇ ಆಮಿಷಗಳಿಗೆ ಒಳಗಾಗದೇ ಆಯ್ಕೆ ಮಾಡಬೇಕು. ಅಭ್ಯರ್ಥಿ ಆಗುವ ಅವಕಾಶ ಸಿಕ್ಕಾಗ ನೈತಿಕ ನಿಷ್ಠೆಯಿಂದ ಮುನ್ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಎಂ. ಪ್ರಭುಸ್ವಾಮಿ, ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಸಿದ್ದರಾಜು ಇದ್ದರು.
ನಗರದ ಎಸ್‌ಬಿಆರ್‌ಆರ್ ಮಹಾಜನ ಕಾನೂನು ಕಾಲೇಜಿನಲ್ಲಿ ಇತ್ತೀಚೆಗೆ ಬಲ್ಲನೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸಿ.ಆರ್. ದಿನೇಶ್ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಯನ್ನು ಉದ್ಘಾಟಿಸಿದರು. ಪ್ರೊ.ಎಂ.ಎಂ. ಪ್ರಭುಸ್ವಾಮಿ, ಸಿದ್ದರಾಜು ಇದ್ದರು.