ಚೊಂಡಿಮುಖೇಡ್ ಗೆ ಸೌರ ವಿದ್ಯುತ್ ಒದಗಿಸಿ

suryakant nagmarpalli
Published on

ಬೀದರ್: ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಔರಾದ್ ತಾಲೂಕಿನ ಗಡಿ ಗ್ರಾಮ ಚೊಂಡಿಮುಖೇಡ್ ಗೆ ಸೌರ ವಿದ್ಯುತ್ ದೀಪ ಒದಗಿಸುವಂತೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಪತ್ರ ಸಲ್ಲಿಸಿ, ಸೌರ ವಿದ್ಯುತ್ ಸೌಲಭ್ಯ ಹೊಂದಿರುವ ಮೊದಲ ಗ್ರಾಮ ಹೆಗ್ಗಳಿಕೆಗೆ ಚೊಂಡಿಮುಖೇಡ್ ಪಾತ್ರವಾಗಿತ್ತು. ಸೌರ ವಿದ್ಯುತ್ ವ್ಯವಸ್ಥೆ ಹಾಳಾಗಿದ್ದರಿಂದ ಸಮಸ್ಯೆಯಾಗಿದೆ. ಗ್ರಾಮದ 525 ಮನೆಗಳಿಗೆ ಹಾಗೂ ಬೀದಿ ದೀಪಗಳಿಗೆ ಸೌರ ವಿದ್ಯುತ್ ವ್ಯವಸ್ಥೆ ಮಾಡಬೇಕಾದ ಅಗತ್ಯವಿದ್ದು, 30 ಲಕ್ಷ ರೂ. ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ನಾಗಮಾರಪಳ್ಳಿ ಮನವಿ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಅವರು ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಇವರು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿದೇರ್ಶಕರಿಗೆ ಪತ್ರ ಬರೆದಿದ್ದಾರೆ. ಸೌರ ವಿದ್ಯುತ್ ದೀಪ ಬೇಡಿಕೆ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net