ಛತ್ರಪತಿ ಶಿವಾಜಿ ಆಡಳಿತ ಮಾದರಿ

Capture01
Published on

ಭಾಲ್ಕಿ: ಛತ್ರಪತಿ ಶಿವಾಜಿ ಮಹಾರಾಜ ಶೌರ್ಯ, ಸಾಹಸ ಮತ್ತು ರಾಷ್ಟ್ರ ಭಕ್ತಿ ಎಲ್ಲರಿಗೆ ಪ್ರೇರಣೆಯಾಗಿದೆ. ಅವರ ಧಾಮರ್ಿಕ ಸಹಿಷ್ಣುತೆಯುಳ್ಳ ಆದರ್ಶದ ಆಡಳಿತ ಇಂದಿಗೂ ಮಾದರಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ನಾಡೋಜ ಡಾ.ಮಹೇಶ ಜೋಶಿ ಹೇಳಿದರು.

ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಮಹಿಳೆಯರ ಬಗ್ಗೆ ಅಪಾರ ಗೌರವ ಹೊಂದಿದ್ದ ಶಿವಾಜಿ ಅವರು ತಾಯಿಯಿಂದ ಪ್ರೇರಣೆ ಪಡೆದು ಉತ್ತಮ ಆಡಳಿತ ನೀಡಿದ್ದರು ಎಂದು ಸ್ಮರಿಸಿದರು.

ಸಾನ್ನಿಧ್ಯ ವಹಿಸಿದ್ದ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಶಿವಾಜಿ ಮಹಾರಾಜರ ರಾಷ್ಟ್ರ ಪ್ರೇಮವನ್ನು ವಿದ್ಯಾಥರ್ಿಗಳು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ನೇತೃತ್ವ ವಹಿಸಿದ್ದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿದರು. ಶ್ರೀ ಮಹಾಲಿಂಗ ಸ್ವಾಮೀಜಿ, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಸಾಹಿತಿಗಳಾದ ರಮೇಶ ಬಿರಾದಾರ, ವೀರಶೆಟ್ಟಿ ಬಾವುಗೆ, ಗಣಪತಿ ಭೂರೆ, ಸಂಸ್ಥೆ ಆಡಳಿತಾಧಿಕಾರಿ ಮೋಹನರಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಕಾಶೀನಾಥ ಲದ್ದೆ ಇದ್ದರು. ಮಧುಕರ ಗಾಂವಕರ್ ನಿರೂಪಣೆ ಮಾಡಿದರು.

ಜಗತ್ತಿನಲ್ಲೇ ಕನ್ನಡ ಪರಿಪೂರ್ಣ ಭಾಷೆಯಾಗಿದೆ ಎಂಬುದು ಅಮೆರಿಕ ಸಂಸ್ಥೆಯೊಂದು ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಕನ್ನಡ ಭಾಷೆಯಲ್ಲಿ ಯಾವುದೇ ಲೋಪದೋಷಗಳಿಲ್ಲ. ಇದೊಂದು ಉತ್ಕೃಷ್ಟ ಭಾಷೆ.| ಡಾ.ಮಹೇಶ ಜೋಶಿ, ಕಸಾಪ ಅಧ್ಯಕ್ಷನಾಡೋಜ ಡಾ.ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಭಾರ ವಹಿಸಿದ ನಂತರ ಸಾಕಷ್ಟು ಬದಲಾವಣೆಯಾಗಿದೆ. ಆಧುನಿಕತೆಗೆ ತಕ್ಕಂತೆ ಎಲ್ಲವೂ ಬದಲಾವಣೆ ಆಗಬೇಕಿದೆ. ಜೋಶಿ ಕಾರ್ಯಕ್ಕೆ ಸದಾ ನಮ್ಮ ಬೆಂಬಲ ಇರಲಿದೆ.| ಡಾ.ಬಸವಲಿಂಗ ಪಟ್ಟದ್ದೇವರು, ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net