ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆಗೆ ಭೂಮಿ ಪೂಜೆ

bkt-20-5
ನವನಗರದ ಅನುಷ್ ಪೆಟ್ರೋಲ್ ಪಂಪ್ ಹತ್ತಿರ ಛತ್ರಿಪತಿ ಶಿವಾಜಿ ಮಹಾರಾಜ ಅಶ್ವಾರೂಢ ಕಂಚಿನ ಮೂರ್ತಿ ನಿರ್ಮಾಣಕ್ಕೆ ಶಾಸಕ ವೀರಣ್ಣ ಚರಂತಿಮಠ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಿ.ಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಮಹೇಶ ಅಥಣಿ, ಸದಾನಂದ ನಾರಾ ಇದ್ದರು.
Published on

ಬಾಗಲಕೋಟೆ: ನವನಗರದ ಅನುಷ್ ಪೆಟ್ರೋಲ್ ಪಂಪ್ ಹತ್ತಿರ ಛತ್ರಿಪತಿ ಶಿವಾಜಿ ಮಹಾರಾಜ ಅಶ್ವಾರೂಢ ಕಂಚಿನ ಮೂರ್ತಿ ನಿರ್ಮಾಣಕ್ಕೆ ಶಾಸಕ ವೀರಣ್ಣ ಚರಂತಿಮಠ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಹಿಂದೂ ಸಾಮ್ರಾಜ್ಯ ಮಹಾನ್ ಶಕ್ತಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಆದಷ್ಟು ಬೇಗ ಮೂರ್ತಿ ಸ್ಥಾಪನೆಗೆ ಬೇಕಾದ ಎಲ್ಲ ಕಾರ್ಯ ಚಟುವಟಿಕೆಗಳು ನಡೆಯಲಿ ಎಂದರು.
ಈ ಸಂದರ್ಭದಲ್ಲಿ ವಿ.ಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಮಹೇಶ ಅಥಣಿ, ಸದಾನಂದ ನಾರಾ, ರಾಜು ನಾಯ್ಕರ, ಎಂ.ಆರ್.ಸಿಂಧೆ, ರಾಜು ವಾಘ, ಮಾರುತಿ ನಲವಡೆ, ಗುಂಡುರಾವ ಶಿಂಧೆ, ಸಂಜೀವ ವಾಡಕರ, ಸಂಗಯ್ಯ ಸರಗಣಾಚಾರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net